Recent Posts

Tuesday, January 21, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡದ ಹಲವೆಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆ : ಬಿಸಿಲ ಬೇಗೆಗೆ ತಂಪೆರೆದ ವರುಣ – ಕಹಳೆ ನ್ಯೂಸ್

ಮಂಗಳೂರು; ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದ ಮಂದಿಗೆ ನಿನ್ನೆ ವರುಣ ತಂಪೆರೆದಿದ್ದಾನೆ. ದಕ್ಷಿಣಕನ್ನಡ ಹಲವೆಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಳ್ಯ, ಕಡಬ, ಬೆಳ್ತಂಗಡಿ ಬಂಟ್ವಾಳ, ಪುತ್ತೂರು, ಸುರತ್ಕಲ್ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಸಿಡಿಲಿನ ಅಬ್ಬರಕ್ಕೆ ಕೆಲ ಸಮಯ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿಡಿಗಲ್‌-ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ರ‌ಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದರಿಂದ, ಕೆಸರುಮಯ ರಸ್ತೆಯಲ್ಲೇ ಜನ ವಾಹನ ಓಡಾಡಬೇಕಾಯಿತು.ಶುಕ್ರವಾರ ಸಂಜೆ ಬೀಸಿದ ಗಾಳಿ ಮಳೆಗೆ ಕನಕಮಜಲಿನಲ್ಲಿ ರಸ್ತೆಗೆ ಮರ, ವಿದ್ಯುತ್‌ ಕಂಬ ಉರುಳಿ ಸಂಚಾರಕ್ಕೆ ತಡೆ ಉಂಟಾಯಿತು. ಮಂಗಳೂರು, ಉಳ್ಳಾಲ, ಮಲ್ಪೆ, ಗಂಗೊಳ್ಳಿ, ಭಟ್ಕಳ, ಹೊನ್ನಾವರ, ಕಾರವಾರ ಕಡಲ ತೀರದ ಪ್ರದೇಶಗಳಲ್ಲಿ ಅಲೆಗಳ ಅಬ್ಬರ ತುಸು ಜೋರಾಗಿಯೇ ಇದ್ದು ಕಡಲ ತೀರಕ್ಕೆ ಹೋಗುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.