ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು.
ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಅವರು ಮಹಾವೀರ ಜಯಂತಿಯ ಶುಭಾಶಯ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಜೈನ್ ಸಮಾಜದ ಪ್ರಮುಖರಾದ ಪಿ. ಜಿನರಾಜ, ಸುದರ್ಶನ್ ಜೈನ್ ಪಂಜಿಕಲ್ಲು, ಸನ್ಮತಿ ಜಯಕೀರ್ತಿ, ಅಜಿತ್ ಕುಮಾರ್ ಜೈನ್, ಧನಂಜಯ ಜೈನ್, ಸಂತೋಷ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.
ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು ಗ್ರಾಮ ಸಹಾಯಕರು ಹಾಜರಿದ್ದರು.