ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ, ಪುತ್ತೂರು ಇವರ ಸಹಯೋಗದಲ್ಲಿ ಸರಕಾರಿಮಹಿಳಾ ಪ್ರಥಮ ದರ್ಜೆ ಕಾಲೇಜು ,ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿಮತದಾನ ಜಾಗೃತಿ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು.
ಪುತ್ತೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಂಸಾರ ಜೋಡು ಮಾರ್ಗ ನಿರ್ದೇಶಕ ಹಾಗೂ ಪತ್ರಕರ್ತ ಶ್ರೀಮೌನೇಶ್ ವಿಶ್ವಕರ್ಮ ಅವರ ನಿರ್ದೇಶನದಲ್ಲಿ ಬೀದಿನಾಟಕವನ್ನು ಸೊಗಸಾಗಿ ಪ್ರಸ್ತುತಪಡಿಸಿದರು. ಬೀದಿನಾಟಕದ ಮೂಲಕವಿದ್ಯಾರ್ಥಿಗಳು ಪ್ರಜಾ ಪ್ರಭುತ್ವದ ಮಹತ್ವದ ಬಗ್ಗೆ, ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮತ್ತು ಮತದಾನದಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಸಮಾಜಕ್ಕೆ ಮತದಾನದ ಬಗ್ಗೆ ಅರಿವು ಮೂಡಿಸಲು ಮತ್ತು ಯಾವುದೇ ಆಮಿಷಗಳಿಗೆಒಳಗಾಗದೆ ಧೈರ್ಯ ಮತ್ತು ಸ್ವಾಭಿಮಾನದಿಂದ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸ್ವೀಪ್ ಸಮಿತಿಯ ಪದಾಧಿಕಾರಿಗಳಾದ ಭರತ್ ರಾಜ್ ಮತ್ತು ತುಳಸಿ, ಬಿಬಿಎವಿಭಾಗದ ಮುಖ್ಯಸ್ಥ ಡಾ.ರಾಧಾಕೃಷ್ಣ ಗೌಡ, ಸಂಸಾರ ಜೋಡು ಬೀದಿ ನಾಟಕ ಕಲಾವಿದರು, ಸ್ನಾತಕೋತ್ತರ ಅಧ್ಯಯನಕೇಂದ್ರ ವಿಭಾಗದ ಸಂಯೋಜಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕರಾದ ಶ್ರೀಮಣಿ ಮತ್ತು ಸ್ನಾತಕೋತ್ತರ ಎಂ.ಎಸ್.ಸಿ ಭೌತಶಾಸ್ತ್ರವಿಭಾಗದ ಸಂಯೋಜಕರಾದ ಶ್ರೀ ವಿಪಿನ್ ನಾಯ್ಕ್ ಕಾರ್ಯಕ್ರಮವನ್ನು ಸಂಯೋಜಿಸಿದರು.