Recent Posts

Monday, January 20, 2025
ಸುದ್ದಿ

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವತಿಯಿಂದ ಅ. 28, 29 ರಂದು ಸಿರಿಧಾನ್ಯ ಆಹಾರ ಮೇಳ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವತಿಯಿಂದ ಅ. 28 ಮತ್ತು 29 ರಂದು “ಸಿರಿಧಾನ್ಯಗಳ ಆಹಾರ ಮೇಳ” ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾರುಕಟ್ಟೆ ಅಧಿಕಾರಿ ರಾಮ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರಮೇಳವನ್ನು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉದ್ಘಾಟಿಸಲಿದ್ದು, ಮಳಿಗೆಯನ್ನು ಮಹಾವೀರ ಅಜ್ರಿ ಉದ್ಘಾಟಿಸುವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು. ರಾಜ್ಯದ 13 ಕಡೆಗಳಲ್ಲಿ ಈಗಾಗಲೇ ಇಂತಹ ಕಾರ್ಯಕ್ರಮ ನಡೆಸಲಾಗಿದೆ.

ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದ.ಕ.ಜಿಲ್ಲೆಯಲ್ಲಿ ಇದೇ ಮೊದಲಬಾರಿಗೆ ಸಿರಿಧಾನ್ಯಗಳ ಮಾರಾಟ ಮತ್ತು ಪ್ರದರ್ಶನ ನಡೆಸಲಾಗುತ್ತಿದೆ. ಮಳಿಗೆಯಲ್ಲಿ ಸಿರಿಧಾನ್ಯಗಳಿಂದ ತಯಾರಿಸಲಾದ ತಿಂಡಿ, ತಿನಿಸು ಲಭ್ಯವಿರುತ್ತದೆ ಎಂದರು.