Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.03ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.03ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.

ಮೇ.02ರಂದು ಬೆಳಿಗ್ಗೆ ಶ್ರೀ ಮಣಿಕಂಠ ಸನ್ನಿಧಾನದಲ್ಲಿ ಗಣಹೋಮ, ಸಂಜೆ ಶಾಸ್ತç ಕಲ್ಪೋಕ್ತ ಪೂಜೆ, ವಾಸ್ತುಹೋಮಾದಿ ಅಧಿವಾಸ ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

   

ಜಾಹೀರಾತು
ಜಾಹೀರಾತು
ಜಾಹೀರಾತು

ಮೇ.03ರಂದು ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಲಿದೆ.

 

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.