Tuesday, January 21, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಇಹ ಲೋಕ ತ್ಯಜಿಸಿದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ –ಕಹಳೆ ನ್ಯೂಸ್

ಬೆಂಗಳೂರು:(ಎ.29) ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಹು ಅಂಗಾAಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಶ್ರೀನಿವಾಸ ಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಶ್ರೀನಿವಾಸ ಪ್ರಸಾದ್ ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು