Sunday, January 19, 2025
ಉಡುಪಿಕುಂದಾಪುರಬೈಂದೂರುಸುದ್ದಿ

ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತಬೇಟಿ : ಒಂದು ಲಕ್ಷ ಲೀಡ್ ಕೊಡಿಸಲು ಕಾರ್ಯಕರ್ತರಿಗೆ ಶಾಸಕರಿಂದ ಪ್ರೇರಣೆ–ಕಹಳೆ ನ್ಯೂಸ್

ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಮತ್ತು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪ್ರತಿ ಮನೆಗೂ ತಲುಪಿಸಬೇಕು. ಮನೆ ಮನೆ ಪ್ರಚಾರದ ಸಂದರ್ಭದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬಿಜೆಪಿ ಸಾಧನೆಯನ್ನು ಮತದಾರರಿಗೆ ಮನವರಿಕೆ ಮಾಡಬೇಕು.‌ ಎಷ್ಟು ಸಾಧ್ಯವೋ ಅಷ್ಟು ಪ್ರಚಾರ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯರಾಗಬೇಕು ಎಂದು ಕರೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೂತ್ ಕಡೆಗೆ ಸಮೃದ್ಧ ನಡಿಗೆ ಯನ್ನು ಈಗಾಗಲೇ ಯಶಸ್ವಿಯಾಗಿ ಪೂರೈಸಿದ್ದಾರೆ. ನಾವೆಲ್ಲರೂ ಈಗ ಇರುವ ಕನಿಷ್ಠ ಸಮಯದಲ್ಲಿ ಪ್ರತಿ ಬೂತ್ ನ ಎಲ್ಲಾ ಮನೆಗಳಿಗೂ ಸಂಚರಿಸಿ ಬಿಜೆಪಿ ಅಭ್ಯರ್ಥಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ಇಲ್ಲಿಂದಲೇ ಬರುವಂತೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಮನವರಿಕೆ ಮಾಡಿದರು.

ಗಂಗೊಳ್ಳಿಯಲ್ಲಿ ನಾಲ್ಕು ಶಕ್ತಿಕೇಂದ್ರದ 11 ಬೂತ್ ಗೆ ಸಂಬಂಧಿಸಿದಂತೆ ಹಾಗೂ ತ್ರಾಸಿಯ ಗುಜ್ಜಾಡಿಯಲ್ಲಿ ಹೆಮ್ಮಾಡಿ, ಹೊಸಾಡು, ಸೇನಾಪುರ ಶಕ್ತಿಕೇಂದ್ರ ವ್ಯಾಪ್ತಿಯ ಸಭೆ ನಡೆಸಿದರು.

ಪ್ರಮುಖರಾದ ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ವಿನೋದ್ ಗುಜ್ಜಾಡಿ, ರವಿ ಖಾರ್ವಿ, ಸದಾನಂದ ಶೆಣೈ, ಶಕ್ತಿಕೇಂದ್ರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.