Sunday, January 19, 2025
ಬೈಂದೂರುಸುದ್ದಿ

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿ ಕೋಟ ಬಿರುಸಿನ ಪ್ರಚಾರ : ಒಂದು ಲಕ್ಷ ಲೀಡ್ ನೀಡುವ ಸಂಕಲ್ಪ ಸಾಕಾರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಕರೆ–ಕಹಳೆ ನ್ಯೂಸ್

ಬೈಂದೂರು: ಭಾರತದ ಸಮಗ್ರ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿರ್ಮೂಲನೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಕರೆ ನೀಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರ್ಗಾಲು, ಬಿಜೂರು, ಶಿರೂರು, ಏಳಜಿತ್ ಮುಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಬಿ ವೈ ರಾಘವೇಂದ್ರ ಅವರಿಗೆ 1 ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಸಹಕಾರ ಮಾಡುವ ನೆಟ್ಟಿನಲ್ಲಿ ಎಲ್ಲರೂ ಶಕ್ತಿಮೀರಿ ಪ್ರಯತ್ನ ಮಾಡೋಣ ಎಂದು ಮತದಾರರಿಗೆ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಡವರ ಮನೆಗಳಲ್ಲಿ ಗ್ಯಾಸ್ ಮೂಲಕ ಅಡುಗೆ ಮಾಡಲು ಅವಕಾಶವಾಯಿತು. 11.50 ಕೋಟಿ ಶೌಚಾಲಯ ಭಾರತದಲ್ಲಿ ನಿರ್ಮಾಣವಾಯಿತು. ದೀನದಯಾಳ್ ಯೋಜನೆಯ ಮೂಲಕ ಕಡು ಬಡವರ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಯಿತು. ಇದೆಲ್ಲದಕ್ಕಿಂತ ದೇಶದ 146 ಕೋಟಿ ಜನರಿಗೆ ಪ್ರಧಾನಿ ಮೋದಿ ಬದುಕಿನ ಗ್ಯಾರಂಟಿ ಕಟ್ಟಿಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಿಂದ ವಿಶ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಮೂಡಿಬರುತ್ತದೆ. ದೇಶದ ಮುಂದಿನ ಜನಾಂಗ ನೆಮ್ಮದಿಯಿಂದ ಬದುಕಲು ಬಿಜೆಪಿಗೆ ಮತ ನೀಡಿ ಎಂದು ಕೋಟ ಶ್ರೀನಿವಾಸ ಪೂಜಾರಿಯವರು ವಿವಿಧಡೆಯಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಕಾಂಬಿಕಾ ಕಾರೀಡಾರ್ ಮೂಲಕ ಸಮೃದ್ಧ ಬೈಂದೂರು

ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಮಾತನಾಡಿ, ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯದ ಜೊತೆಗೆ ಕೊಲ್ಲೂರು ಮೂಕಾಂಬಿಕ ಕಾರೀಡಾರ್ ನಿರ್ಮಾಣದ ಮೂಲಕ ಸಮೃದ್ಧ ಬೈಂದೂರು ಪರಿಕಲ್ಪನೆಗೆ ಇನ್ನಷ್ಟು ಶಕ್ತಿ ತುಂಬುವ ಯೋಚನೆ, ಯೋಜನೆ ಹಾಕಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಂದೂರಿಗೆ ಕರೆದುಕೊಂಡು ಬರುವಂತೆ ಮಾಡಬೇಕು. ಇದಕ್ಕಾಗಿ ಎಲ್ಲರೂ ಬಿಜೆಪಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಪೂಜಾರಿ ಹಾಗೂ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.