Recent Posts

Monday, January 20, 2025
ಸುದ್ದಿ

ಮಹಿಳೆಯ ಮೇಲಿನ ದೌರ್ಜನ್ಯ ಆರೋಪ ಖಂಡಿಸಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಮಹಿಳೆಯ ಮೇಲಿನ ದೌರ್ಜನ್ಯ ಆರೋಪವನ್ನ ಖಂಡಿಸಿ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.

ಕೈಕಂಬ ಸಮೀಪದ ಗಂಜಿಮಠ ನಿವಾಸಿ ಸಲೀಕಾ ಎಂಬವರ ಮೇಲೆ ಪತಿಯ ವಿರುದ್ಧದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ಎಸಗಿದ ಆರೋಪ ಬಜ್ಪೆ ಪೊಲೀಸ್ ಇನ್ ಸ್ಪೆಕ್ಟರ್ ಮೇಲೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಎಸ್‌ಡಿಪಿಐ ಮೂಲ್ಕಿ-ಮೂಡಬಿದ್ರೆ ಕ್ಷೇತ್ರ ಸಮಿತಿಯ ವತಿಯಿಂದ ಬಜ್ಪೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಯ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್‌ಸ್ಪೆಕ್ಟರ್ ಹಲ್ಲೆಗೈದ ಪರಿಣಾಮ ಮಹಿಳೆ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರ ಚಿಕಿತ್ಸೆಯ ವೆಚ್ಚವನ್ನು ಇಲಾಖೆ ಭರಿಸಬೇಕು.

ತಪ್ಪಿತಸ್ಥ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.