Thursday, November 21, 2024
ಕೊಡಗುರಾಜಕೀಯಸುದ್ದಿ

ನರೇಂದ್ರ ಮೋದಿಯವರಿಗೆ ನೀಡುವ ಒಂದೊAದು ಮತವು ಅಮೂಲ್ಯ;ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ 1ಲಕ್ಷಕ್ಕೂ ಅಧಿಕ ಲೀಡ್ ನೀಡಲು ಶಾಸಕರಾದ ವೇದವ್ಯಾಸ ಕಾಮತ್ ಕರೆ-ಕಹಳೆ ನ್ಯೂಸ್

ಸಿದ್ದಾಪುರ: ಕಳೆದ ಹತ್ತು ದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ, 370 ರದ್ದತಿ, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಸಹಿತ ಹಲವು ಮಹತ್ತರ ಸಾಧನೆ, ವಿಶ್ವದಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವ ಎಲ್ಲವೂ ನಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ಒಂದು ಮತದಿಂದ ಸಾಕಾರವಾಗಿದೆ. ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಅತ್ಯಧಿಕ ಲೀಡ್ ನಲ್ಲಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಕರೆ ನೀಡಿದರು.

ಸಿದ್ದಾಪುರದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಹಾಗೂ ಗಂಗೊಳ್ಳಿಯ ಮಲ್ಯರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಸೇರ್ಪಡೆಗೊಳಿಸಲಾಗಿದೆ. ಭಾರತೀಯರ ಶತಶತಮಾನಗಳ ಕನಸಾಗಿದ್ದ ಅಯೋಧ್ಯೆಯ ಶ್ರೀ ರಾಮನ ಜನ್ಮಸ್ಥಳದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಇಂದು ಸಹಕಾರಗೊಂಡಿದೆ. ಆಯುಷ್ಮಾನ್ ಯೋಜನೆ ಅಡಿ ಕೋಟ್ಯಾಂತರ ರೋಗಿಗಳಿಗೆ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆ ದೊರೆತಿದೆ. ಕೋವಿಡ್ ಸಂದರ್ಭದಲ್ಲಿ ದೇಶದ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ಸಿಕ್ಕಿದೆ. ಇದೆಲ್ಲವನ್ನು ಸಾಕಾರಗೊಳಿಸಿರುವುದು ಕೇಂದ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ. ಹೇಗೆ ಸಾಧ್ಯವಾಯಿತೆಂದರೆ ನಾವೆಲ್ಲರೂ ನೀಡಿರುವ ಒಂದೊAದು ಮತದಿಂದಲೇ ಸಾಕಾರವಾಗಿದೆ.
ದೇಶದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ. ಅದಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರಿನಿAದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಶಾಸಕರಾದ ಗುರುರಾಜ ಗಂಟಿಹೊಳೆಯವರ ಸಂಕಲ್ಪಕ್ಕೆ ನಾವೆಲ್ಲರೂ ಜೊತೆಯಾಗಬೇಕು. ಈ ಬಾರಿ ಬಿ. ವೈ.ರಾಘವೇಂದ್ರ ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಮಾತನಾಡಿ, ಬಿಜೆಪಿ ಅಭ್ಯರ್ಥಿಯನ್ನು ದಾಖಲೆಯ ಅಂತರದಲ್ಲಿ ಗೆಲ್ಲಿಸಲು ನಾವೆಲ್ಲರೂ ಸಂಘಟಿತರಾಗಿ ಕಾರ್ಯ ನಿರ್ವಹಿಸೋಣ ಎಂದರು.
ನAತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಪಡೆದರು.
ಸ್ಥಳೀಯ ಪ್ರಮುಖರಾದ ಗೋಪಾಲ ಕಾಮತ್ ಹಾಗೂ ಕಾರ್ಯಕರ್ತರು, ಮುಖಂಡರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು