ಬೆಂಗಳೂರು : ಹಾಸನ ಅಶ್ಲೀಲ ವೀಡಿಯೋ ಕೇಸಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಕ್ರೈಮ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 376(2), 506, 354(ಂ) , 354(ಃ), 354(ಅ) ಅಡಿಯಲ್ಲಿ ಎಫ್ಐಆರ್ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ದೊಡ್ಡ ಸಂಕಷ್ಟ ಎದುರಾಗಿದೆ.
ಈಗಾಗಲೇ ಎಸ್ಐಟಿ ಅಧಿಕಾರಿಗಳು ಹಾಸನ ಅಶ್ಲೀಲ ವಿಡಿಯೋ ಕೇಸ್ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಸಂಬAಧ ಹಲವರ ಹೇಳಿಕೆಯನ್ನು ಕೂಡ ದಾಖಲಿಸಿದ್ದಾರೆ. ಇದರ ಮಧ್ಯೆ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದ್ದು, ಮಾಜಿ ಸಚಿವ ರೇವಣ್ಣನ ಮಗನಿಗೆ ಜೈಲು ಗ್ಯಾರಂಟಿ ಆಗಿದೆ.
ಇನ್ನು, ಈ ಬಗ್ಗೆ ಪ್ರಜ್ವಲ್ ರೇವಣ್ಣ ಈಗಾಗಲೇ ಮೌನಮುರಿದಿದ್ದಾರೆ. ಆದಷ್ಟು ಬೇಗ ಸತ್ಯಾಂಶ ಹೊರ ಬರಲಿದೆ ಎಂದು ಟ್ವೀಟ್ ಕೂಡ ಮಾಡಿದ್ದರು. ಇವರ ವಿರುದ್ಧ ಇಡೀ ದೇಶಾದ್ಯಂತ ಎಲ್ಲೆಡೆ ಮಹಿಳಾ ಪರ ಹೋರಾಟಗಾರರು ಮತ್ತು ವಿರೋಧ ಪಕ್ಷಗಳು ಮುಗಿಬಿದ್ದಿವೆ.