ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಭಾಗಿ-ಕಹಳೆ ನ್ಯೂಸ್
ಸಿದ್ದಾಪುರ : ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಬಿ.ವೈ ರಾಘವೇಂದ್ರ ರವರ ಪರ ಮತಯಾಚನೆ ನಡೆಸಿದ ಅವರು, ಇಲ್ಲಿ ನೆರೆದಿರುವ ಕಾರ್ಯಕರ್ತರ ಉತ್ಸಾಹ ನೋಡಿದರೆ ಈ ಬಾರಿಯೂ ಬಿಜೆಪಿ ಇಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿ ಪ್ರಚಂಡ ವಿಜಯಕ್ಕೆ ಮುನ್ನುಡಿ ಬರೆಯುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕರುಗಳಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಕಿರಣ್ ಕೂಡ್ಗಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ದ ಕ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಅರುಣ್ ಕುಮಾರ್ ಪುತ್ತಿಲ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.