Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು –ಕಹಳೆ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ಮೃತರಾದ ಬಾಲಕಿಯರು.
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬAಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು.
ಈ ವೇಳೆ ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದು, ಮನೆಯವರ ಮುಂದೆಯೇ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.
ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂಬ ಕೂಗು ಕೇಳಿ ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು