Tuesday, January 28, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌAಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ.

ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ.ಬಂಟರ ಭವನದ ಹೊರಗಡೆಯಲ್ಲಿ ಈತನ ಸೇರಿದ ಬೈಕ್ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌAಡ್ ಮೇಲೆ ಕುಳಿತು ಕೊಂಡಿರಬೇಕು.ಅ ಸಂದರ್ಭದಲ್ಲಿ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದ ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು