Monday, January 20, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಿನ್ನಿಗೋಳಿಯ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ಹರಕೆಯ ನೇಮೋತ್ಸವ ಸಲ್ಲಿಸಿದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಹೊರವಲಯದ ಕಿನ್ನಿಗೋಳಿ ಎಂಬಲ್ಲಿರುವ ಶ್ರೀನಿಧಿ ಶೆಟ್ಟಿಯವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಹರಕೆಯ ನೇಮೋತ್ಸವ ಅದ್ಧೂರಿಯಿಂದ ನಡೆಯಿತು. ಈ ವೇಳೆ ಕೆಜಿಎಫ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ನೇಮೋತ್ಸವ ಹರಕೆ ತೀರಿಸಿದ್ದಾರೆ. ಈ ಹಿಂದೆ ಶ್ರೀನಿಧಿ ಶೆಟ್ಟಿ ಹರಕೆ ಹೊತ್ತಿದ್ದರಿಂದ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದೆ. ಇದರಲ್ಲಿ ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬAಧಿಕರು ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನೇಮೋತ್ಸವದಲ್ಲಿ ಶ್ರೀನಿಧಿ ಶೆಟ್ಟಿ ಅವರ ಕುಟುಂಬಸ್ಥರು, ಸಂಬAಧಿಕರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದಾರೆ. ತನ್ನ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದ ಇದ್ದು, ತನ್ನ ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಹೇಳಿಕೊಂಡಿದ್ದರು. ಅದರಂತೆ ಶ್ರೀನಿಧಿ ಶೆಟ್ಟಿ ಇದೀಗ ಹರಕೆಯನ್ನು ಸಲ್ಲಿಸಿದ್ದಾರೆ. ಇನ್ನು ನೇಮೋತ್ಸವದಲ್ಲಿ ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀಯ, ಯಶಸ್ಸು ಸಿಗಲಿದೆ ಎಂದು ದೈವಗಳು ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು