Recent Posts

Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಇಹಲೋಕ ತ್ಯಜಿಸಿದ ದ.ಕ ಜಿಲ್ಲೆಯ ಪ್ರಭಾವಿ ನಾಯಕ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ – ಕಹಳೆನ್ಯೂಸ್

ನೆಲ್ಯಾಡಿ: ದ.ಕ ಜಿಲ್ಲೆಯ ಪ್ರಭಾವಿ ನಾಯಕ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇದೆ ಸುಬ್ಬ ಪೂಜಾರಿ & ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು