Tuesday, January 21, 2025
ಉಡುಪಿದಕ್ಷಿಣ ಕನ್ನಡಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್ ರಾಜ್ಯಕ್ಕೆ ಟಾಪರ್ –ಕಹಳೆ ನ್ಯೂಸ್

ಬಾಗಲಕೋಟೆ :ಎಸ್‌ಎಸ್‌ಎಲ್‌ಸಿಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್‌ಅವರ ಸಾಧನೆಗೆ ಜಿಲ್ಲಾ ಪಂಚಾಯಿತಿ ಸಿಇಓ ಶಶಿಧರ ಕುರೇರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಇಓ ಕುರೇರ್,ಇಡೀ ರಾಜ್ಯವೇ ಖುಷಿ ಪಡುವ ಸಾಧನೆಯನ್ನು ನಮ್ಮ ಜಿಲ್ಲೆಯಅಂಕಿತಾ ಕೊಣ್ಣುರ್ ಮಾಡಿದ್ದಾರೆ. ಸಣ್ಣ ರೈತ ಕುಟುಂಬದ ಅಂಕಿತಾ,ಸರ್ಕಾರಿ ಶಾಲೆಯಲ್ಲಿ ಓದಿ, ರಾಜ್ಯದ ಎಲ್ಲಾ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೂ ಮಾದರಿ ಆಗುವ ಸಾಧನೆ ಮಾಡಿದ್ದಾರೆ.
ಬಾಲಕಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದತುAಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:SSLC Result 2024; ಬಾಗಲಕೋಟೆಯಅಂಕಿತಾ ಬಸಪ್ಪ ರಾಜ್ಯಕ್ಕೆ ಟಾಪರ್‌ಹಾಗೆಯೇ ಬಾಗಲಕೋಟೆ ಜಿಲ್ಲೆ ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 24ನೇ ಸ್ಥಾನ ಪಡೆದಿತ್ತು. ಈ ಬಾರಿ 13ನೇ ಸ್ಥಾನಕ್ಕೆ ಬಂದಿದೆ. 11 ಸ್ಥಾನ ಪ್ರಗತಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು