Tuesday, January 21, 2025
ಕಾರ್ಕಳಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ. ಫಲಿತಾಂಶ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಜ್ಯಕ್ಕೆ 3ನೇ ಸ್ಥಾನ – ಕಹಎ ನ್ಯೂಸ್

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರ, 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಸಹನಾ ಎನ್ 623 ಅಂಕಗಳೊಂದಿಗೆ ಶಾಲೆಗೆ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 3ನೇ ಸ್ಥಾನಿಯಾಗಿ, ಶೋಧನ್ ಆರ್ ಹೆಗ್ಡೆ 622 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನಿಯಾಗಿ, ರಿಯಾನ್ ಸಲ್ವಾ 621 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಹಾಗೂ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರೀಕ್ಷೆಗೆ ಹಾಜರಾದ 126 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು 6(ಘಿ)ಕ್ಕೂ ಹೆಚ್ಚು ಅಂಕಗಳನ್ನು, 8 ವಿದ್ಯಾರ್ಥಿಗಳು ಶೇ.98 ಕ್ಕಿಂತ ಅಧಿಕ ಅಂಕಗಳನ್ನು, 38 ವಿದ್ಯಾರ್ಥಿಗಳು ಶೇ.95 ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ ಅಲ್ಲದೆ, 74 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು