Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆಮಂತ್ರಣವಿಲ್ಲದೆ ಮದುವೆ ಸಮಾರಂಭಕ್ಕೆ ಬಂದ ಅಪರಿಚಿತ ಯುವಕರು : ಹುಡುಗಿಯರ ಫೋಟೋ ಕ್ಲಿಕ್ಕಿಸಿ ಧರ್ಮದೇಟು ತಿಂದು ಪರಾರಿ – ಕಹಳೆ ನ್ಯೂಸ್

ಪುತ್ತೂರು: ಮದುವೆ ಸಮಾರಂಭಕ್ಕೆ ಆಮಂತ್ರಣವಿಲ್ಲದೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅಲ್ಲದೇ ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್ ಪೋಸ್ಟ್ ವೈರಲ್ ಆಗಿದೆ.


ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಸಂಬAಧವೇ ಇಲ್ಲದ ಅಪರಿಚಿತ ವ್ಯಕ್ತಿ ಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಮಹಿಳೆಯೊಬ್ಬರು ಇದನ್ನು ಗಮನಿಸಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡಿದ್ದಾರೆ. ಮೊಬೈಲ್ ಪರಿಶೀಲಿಸಿದಾಗ ನೂರಾರು ಹುಡುಗಿಯರ ಪೋಟೋ ಗ್ಯಾಲರಿಯಲ್ಲಿ ಇರುವುದು ಕಂಡುಬAದಿದೆ.
mದುವೆಯಲ್ಲಿ ನೆರೆದಿದ್ದವರು ಈ ಕುರಿತು ವಿಚಾರಿಸಿದಾಗ ಸಂಬAಧಿಕರೊಬ್ಬರ ಪುತ್ರ ಹೇಳಿದ್ದಕ್ಕಾಗಿ ಫೋಟೋ ಕ್ಲಿಕ್ಕಿಸಿದ್ದೇವೆ ಎಂದು ಹೇಳಿದ್ದಾರೆ. ಅನಂತರ ತಪ್ಪೊಪ್ಪಿಕೊಂಡು ಏಟು ತಿಂದು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು