Tuesday, January 21, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಸಂಸ್ಥೆ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು: ಆರು ದಶಕಗಳಿಗೂ ಮಿಕ್ಕಿ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಪುತ್ತೂರಿನ ಏಕೈಕ ವಿದ್ಯಾಸಂಸ್ಥೆ– ಕಹಳೆ ನ್ಯೂಸ್

ಗ್ರಾಮೀಣ ಪ್ರದೇಶದ ಜನತೆಯ ಶೈಕ್ಷಣಿಕ ಕನಸುಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ 1965ರಲ್ಲಿ ಪುತ್ತೂರಿನ ಜನತೆಯ ಪ್ರೋತ್ಸಾಹದಿಂದ ರೂಪುಗೊಂಡ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು. ಆಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪನೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜು, ಮೌಲ್ಯಾಧಾರಿತ ಕಲಿಕೆ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುವ ಪ್ರತಿಷ್ಠಿತ ಸಂಸ್ಥೆಗಳಲ್ಲೊAದಾಗಿ ನಾಡಿನಾದ್ಯಂತ ಗುರುತಿಸಿಕೊಂಡಿದೆ.

ಉತ್ತಮ ಫಲಿತಾಂಶ
ವಿವೇಕಾನAದ ವಿದ್ಯಾಸಂಸ್ಥೆಯು ಕಳೆದ ಹಲವು ದಶಕಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಾ ಬಂದಿರುವುದು ಗಮನಾರ್ಹ. 2023-24 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜು ಶೇಕಡಾ 98.33 ಫಲಿತಾಂಶವನ್ನು ಪಡೆದಿದೆ. 482 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 331 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಕಲಾ ವಿಭಾಗದಲ್ಲಿ 594 ಅಂಕಗಳನ್ನು ಗಳಿಸುವ ಮೂಲಕ ಪುರೋಹಿತ್ ಖುಷಿಬೆನ್ ರಾಜೇಂದ್ರಕುಮಾರ್ ರಾಜ್ಯಕ್ಕೆ ಮೂರನೇ ಸ್ಥಾನವನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವರ್ಷಾ ಪ್ರಕಾಶ್ 588 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ ಹತ್ತನೇ ಸ್ಥಾನ ಹಾಗೂ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ನೇತ್ರಾ ಡಿ. 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ ಆರನೇ ಸ್ಥಾನ ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಅದೇ ರೀತಿ ಐ.ಐ.ಟಿ. ಹಾಗೂ ಎನ್.ಐ.ಟಿ.ಕೆ. ಗಳಿಗೆ ಪ್ರವೇಶ ಕಲ್ಪಿಸುವ 2023-24 ನೇ ಸಾಲಿನ ಜೆ.ಇ.ಇ. ಮೈನ್ಸ್ ಪರೀಕ್ಷೆಯಲ್ಲಿ ಶೇ.98.23 ಅಂಕ ಗಳಿಸುವುದರ ಮೂಲಕ ಗಮನ ಗೌರಿ ಎಸ್. ಎಮ್. ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ 591 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಏಳನೇ ಸ್ಥಾನ ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಆಯ್ಕೆ
ರಾಜ್ಯದ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳು ವಿವೇಕಾನಂದ ಪದವಿಪೂರ್ವ ಕಾಲೇಜನ್ನು ಆಯ್ಕೆ ಮಾಡಿಕೊಂಡು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಪ್ರಸ್ತುತ ಸಾಲಿನಲ್ಲಿ 1690 ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ಈ ಶಿಕ್ಷಣ ಸಂಸ್ಥೆ ರಾಜ್ಯದಲ್ಲೇ ಪ್ರತಿಷ್ಠಿತ ಕಾಲೇಜು ಎಂದು ಗುರುತಿಸುವ ಮಟ್ಟಿಗೆ ಬೆಳೆದು ನಿಂತಿದೆ. ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಶಿಕ್ಷಣವನ್ನು ನೀಡಲು ಬೇಕಾದ ಕೊಠಡಿಗಳು, ಸುಸಜ್ಜಿತವಾದ ಎಂಟು ಪ್ರಯೋಗಾಲಯಗಳು, ವಿದ್ಯಾಭ್ಯಾಸಕ್ಕೆ ಸೂಕ್ತ ಪರಿಸರವನ್ನು ನಿರ್ಮಿಸುವ ವಸತಿ ನಿಲಯಗಳು, ವಿಸ್ತಾರವಾದ ಮೈದಾನ ಮತ್ತು ವ್ಯಾಯಾಮ ಶಾಲೆಗಳನ್ನು ಹೊಂದಿರುವ ಈ ವಿದ್ಯಾಸಂಸ್ಥೆಯು, ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕ ಪರಂಪರೆ, ದೇಶಪ್ರೇಮ, ಶಿಸ್ತು, ಸಚ್ಚಾರಿತ್ರ‍್ಯ, ಉತ್ತಮ ಹವ್ಯಾಸ, ಸದಭಿರುಚಿಗಳನ್ನು ಪೋಷಿಸುವ, ಬದುಕಿನ ಸಮಸ್ಯೆಗಳನ್ನು ಎದುರಿಸುವ ಮನೋಭಾವವನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಎಸ್. ಎಸ್. ಎಲ್. ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ. 95 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ವಿಶೇಷ ಶುಲ್ಕ ವಿನಾಯಿತಿ ಹಾಗೂ ಶೇ. 98ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

ಸ್ಪರ್ಧಾತ್ಮಕ ಪರೀಕ್ಷಾ ಘಟಕದ ವತಿಯಿಂದ ಸಿ.ಇ.ಟಿ, ನೀಟ್, ಜೆ.ಇ.ಇ ಮತ್ತು ಇತರ ರಾಷ್ಟ್ರಮಟ್ಟದ ವೈದ್ಯಕೀಯ, ಇಂಜಿನಿಯರಿAಗ್ ಪ್ರವೇಶ ಪರೀಕ್ಷೆಗಳಿಗೆ ಬೇಕಾದ ಮಾಹಿತಿ ಮತ್ತು ನುರಿತ ಅಧ್ಯಾಪಕರಿಂದ ವಿವಿಧ ರೀತಿಯ ತರಬೇತಿಗಳ ಸೌಲಭ್ಯಗಳಿದ್ದು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ. ಎ. ಫೌಂಡೇಶನ್ ತರಬೇತಿಯ ವ್ಯವಸ್ಥೆಯಿದೆ. ಇಂತಹ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಸಂಸ್ಥೆಯು ಹೆಚ್ಚಿನ ಶ್ರಮ ವಹಿಸುತ್ತಿದೆ.

ವಿಶೇಷ ಸರ್ಟಿಫಿಕೇಟ್ ಕೋರ್ಸ್
ಪ್ರಸಕ್ತ ವರ್ಷ ವಿವೇಕಾನಂದ ಪದವಿಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ವಿಶೇಷವಾಗಿ ಸರ್ಟಿಫಿಕೇಟ್ ಕೋರ್ಸ್ಗಳನ್ನು ಪರಿಚಯಿಸುತ್ತಿದೆ. ಪದವಿಪೂರ್ವ ಶಿಕ್ಷಣ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಈ ವಿನೂತನ ಪ್ರಯೋಗವನ್ನು ನಮ್ಮ ಕಾಲೇಜು ಆರಂಭಿಸುತ್ತಿದ್ದು, ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯಗಳನ್ನು ಪರಿಚಯಿಸಲು ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ತಿಳಿದುಕೊಳ್ಳಲೇಬೇಕಾದ ಷೇರು ವಹಿವಾಟು, ಟ್ಯಾಲಿ, ಡಿಜಿಟಲ್ ಬ್ಯಾಂಕಿAಗ್ ವ್ಯವಹಾರ ಮುಂತಾದ ವಿಷಯಗಳ ಬಗ್ಗೆ ವ್ಯಾವಹಾರಿಕ ಹಾಗೂ ಪ್ರಾಯೋಗಿಕ ಜ್ಞಾನ ನೀಡಲು ಈ ಕೋರ್ಸ್ ಸಹಕಾರಿಯಾಗಲಿದೆ.

ರೇಡಿಯೋ ಪಾಂಚಜನ್ಯ
ಮಾತೃಸAಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘ, ಕಾಲೇಜಿನ ಕ್ಯಾಂಪಸ್‌ನಲ್ಲಿ ಸ್ಥಾಪಿಸಿರುವ ರೇಡಿಯೋ ಪಾಂಚಜನ್ಯ 90.8 ಸಮುದಾಯ ಬಾನುಲಿ ಕೇಂದ್ರದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನೇತೃತ್ವದಲ್ಲಿ ಪುಸ್ತಕ ಪರಿಚಯ, ಸಣ್ಣ ಕಥೆ, ಕವಿತೆ, ಪ್ರಬಂಧ, ಲೇಖನ, ಭಾಷಣ, ಹಾಡು, ಜನಪದ ಗೀತೆ, ಭಕ್ತಿ ಗೀತೆ, ಕಗ್ಗ ಮತ್ತು ವ್ಯಾಖ್ಯಾನ, ಅಡುಗೆ ವಿಶೇಷ, ಯಕ್ಷಗಾನ ತಾಳ ಮದ್ದಳೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ವಿಶೇಷತೆಗಳು
ವಿಶಾಲವಾದ ಕ್ರೀಡಾಂಗಣವನ್ನು ಹೊಂದಿರುವ ಕಾಲೇಜು ತನ್ನ ಆರಂಭದ ದಿನಗಳಿಂದಲೂ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದು, ಹಲವಾರು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನೀಡಿದ ಕೀರ್ತಿಗೆ ಭಾಜನವಾಗಿದೆ. ಹಾಗೆಯೇ ವಿದ್ಯಾವರ್ಧಕ ಸಂಘ ರೂಪಿಸಿರುವ ಯಶಸ್ ಸಂಸ್ಥೆಯು ಆವರಣದಲ್ಲೇ ಇದ್ದು, ಐ.ಎ.ಎಸ್, ಐ.ಪಿ.ಎಸ್ ನಂತಹ ಪರೀಕ್ಷೆಗಳಿಗೆ ಮಾರ್ಗದರ್ಶನ ನೀಡುತ್ತಿದೆ.

ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ / ಪಿಸಿಎಂಸಿ / ಪಿಸಿಎಂಎಸ್ / ಪಿಸಿಎಂಇ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಗಣಕವಿಜ್ಞಾನ, ಎಲೆಕ್ಟ್ರಾನಿಕ್ಸ್, ಸಂಖ್ಯಾಶಾಸ್ತ್ರ), ವಾಣಿಜ್ಯ ವಿಭಾಗದಲ್ಲಿ ಎಸ್‌ಇಬಿಎ / ಎಸ್‌ಸಿಬಿಎ / ಇಸಿಬಿಎ (ಸಂಖ್ಯಾಶಾಸ್ತ್ರ , ಅರ್ಥಶಾಸ್ತ್ರ, ವ್ಯವಹಾರಶಾಸ್ತ್ರ, ಗಣಕವಿಜ್ಞಾನ, ಲೆಕ್ಕಶಾಸ್ತ್ರ) ಹಾಗೂ ಕಲಾವಿಭಾಗದಲ್ಲಿ ಎಚ್.ಇ.ಪಿ.ಎಸ್. (ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ), ಇಂಗ್ಲೀಷ್, ಕನ್ನಡ, ಹಿಂದಿ, ಸಂಸ್ಕೃತ ಭಾಷೆಗಳ ಅಧ್ಯಯನಕ್ಕೆ ಅವಕಾಶವಿದೆ.

ದೂರದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಕಾಲೇಜು ಆವರಣದಲ್ಲೇ ಪ್ರತ್ಯೇಕವಾದ ಹಾಸ್ಟೆಲ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ದೇಶಪ್ರೇಮವನ್ನು ಬೆಳೆಸುವುದರೊಂದಿಗೆ ಸೈನಿಕ ಶಿಕ್ಷಣವನ್ನು ಪಡೆಯುವುದಕ್ಕಾಗಿ ಎನ್.ಸಿ.ಸಿ ವಿಭಾಗ ಸಕ್ರಿಯವಾಗಿ ಕಾರ್ಯಾಚರಿಸುತ್ತಿದೆ. ಕಲಿಕೆ, ಕ್ರೀಡೆ, ಸಾಹಿತ್ಯಿಕ, ಸಾಂಸ್ಕೃತಿಕ ರಂಗಗಳಲ್ಲಿ ನಿರಂತರ ಮುಂಚೂಣಿಯಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು ಕಾಲದ ಅಗತ್ಯಗಳಿಗೆ ತಕ್ಕ ಶಿಕ್ಷಣ ನೀಡುವ ಸಮಗ್ರ ಚಿಂತನೆಯೊAದಿಗೆ ಬದುಕಿನ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಬೇಕಾದ ಕೌಶಲ್ಯಗಳನ್ನು ರೂಢಿಸುವ, ವ್ಯಕ್ತಿತ್ವವನ್ನು ಅರಳಿಸುವ, ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳುವ ಸುಭದ್ರ ಪಂಚಾAಗ ಇಲ್ಲಿನ ಶಿಕ್ಷಣ ಸ್ವರೂಪದಲ್ಲಿದೆ.

ಹೆಚ್ಚಿನ ಮಾಹಿತಿಗಳಿಗಾಗಿ ಕಾಲೇಜು ಜಾಲತಾಣ www.vivekanandapuc.com ಅಥವಾ ಮೊಬೈಲ್ ಸಂಖ್ಯೆ: 8073700468, 8105072386 ಯನ್ನು ಸಂಪರ್ಕಿಸಬಹುದು.