Friday, November 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ– ಕಹಳೆ ನ್ಯೂಸ್

ಪುತ್ತೂರು; ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರು ಆಂದ್ರಪ್ರದೇಶದ ಕುಪ್ಪಂ ನ ದ್ರಾವಿಡಿಯನ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ Synthesis and Characterizations of some bioactive molecules: Triazolopyrimidine, Quinoline,Benzisoxalzole and Benzimidazole Derivatives  ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಉಜಿರೆಯ ಎಸ್ ಡಿಎಂ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ.ಪಿ.ವಿಶ್ವನಾಥ್ ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮಂಡಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರೊ.ಕೃಷ್ಣ ಕಾರಂತ್ ಇವರು ಸುಮಾರು 34 ವರ್ಷಗಳಿಂದ ರಸಾಯನಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಿದ್ದಾರೆ. ಪುತ್ತೂರು ತಾಲೂಕಿನ ಕಾಂಚನ ನಿವಾಸಿ ದಿ.ವಿಷ್ಣು ಕಾರಂತ ಹಾಗೂ ದಿ.ಗೌರಿ ಕಾರಂತ ಇವರ ಪುತ್ರರಾಗಿದ್ದು ಪ್ರಸ್ತುತ ಪುತ್ತೂರಿನ ಕಾರ್ಜಲ್ ಬಯಂಬೆಯಲ್ಲಿ ವಾಸ್ತವ್ಯವಾಗಿದ್ದಾರೆ.