Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ-ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.

ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು ಆದೃಷ್ಟವನ್ನು ತರುತ್ತದೆ ಎಂಬುದು ನಂಬಿಕೆ ಆದುದರಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ ರೂ. 200 ರವರೆಗೆ ಕಡಿತ ಹಾಗೂ ವಜ್ರಾಭರಣಗಳ ಖರೀದಿಯಲ್ಲಿ ಪ್ರತಿ ಕ್ಯಾರೆಟ್‌ ಗೆ 7,000 ರೂ. ವರೆಗೆ ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತಿ ಕೆ.ಜಿ.ಗೆ 2,000 ರೂ ರಿಯಾಯಿತಿ ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಪುರಾತನ ಆಭರಣಗಳ ವಿಭಾಗ “ಪ್ರಾಜೆ”ಯಲ್ಲಿ ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆ್ಯಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿದೆ. ಅದೇ ರೀತಿ “ಗ್ಲೋ” ವಜ್ರಾಭರಣ ವಿಭಾಗದಲ್ಲಿ ಸುಮಾರು 2,000ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಪ್ರಜ್ವಲಿಸುವ ಅದ್ಭುತ ವಜ್ರಾಭರಣಗಳ ಸಂಗ್ರಹವಿದೆ. “ಪಾರ್ಥ” ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆ್ಯಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೇ ಇನ್ನು ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚೆನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದೊಗೆ ಈ ಕೊಡುಗೆ ತಮ್ಮ ಎಲ್ಲ ಮಳಿಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ