Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಿಂದ ಸಮುದ್ರಕ್ಕೆ ಹಾರುವುದಾಗಿ ಬೆದರಿಕೆ ಹಾಕಿದ ಮುಹಮ್ಮದ್ ಬಿ.ಸಿ ; ದುರ್ವರ್ತನೆ ವಿರುದ್ದ ಬಜ್ಪೆ ಠಾಣೆಯಲ್ಲಿ ಪ್ರಕರಣ – ಕಹಳೆ ನ್ಯೂಸ್

ಮಂಗಳೂರು : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿ ಸಂಬಂಧ ಏರ್ ಇಂಡಿಯಾ ಎಕ್ಸ್ ಪ್ರೆಸ್ ಭದ್ರತಾ ಸಂಯೋಜಕ ಸಿದ್ದಾರ್ಥ ದಾಸ್ ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇರಳದ ಕಣ್ಣೂರಿನ ನಿವಾಸಿಯಾಗಿರುವ ಮುಹಮ್ಮದ್ ಬಿ.ಸಿ(24) ವಿರುದ್ದ ಈ ಆರೋಪ ಕೇಳಿಬಂದಿದೆ. ಮೇ 8 ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ವಿಮಾನದ ಸಿಬ್ಬಂದಿಯೊಂದಿಗೆ ಅಶಿಸ್ತಿನ ರೀತಿಯಲ್ಲಿ ವರ್ತಿಸಿ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ವ್ಯಕ್ತಿ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು. ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಬಳಿಯೇ ಇದ್ದರೂ ಪದೇ – ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ನೀಡಿದ್ದಾನೆ. ನಂತರ ಆತ ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಬೆದರಿಕೆ ಒಡ್ಡಿ ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದಲ್ಲದೇ ವಿಮಾನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ಇದಾದ ಬಳಿಕ ವಿಮಾನ ನಿಲ್ದಾಣದ ಸಿಬ್ಬಂದಿ ಜೊತೆಗೂ ಅನುಚಿತವಾಗಿ ವರ್ತಿಸಿರುವ ಬಗ್ಗೆ ದೂರು ದಾಖಲಾಗಿದೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.