Sunday, January 19, 2025
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಪರಿಷತ್ ಚುನಾವಣೆಯಲ್ಲಿಯೂ ಬೆಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ; ಜೆಡಿಎಸ್ ಗೆ 2 ಸ್ಥಾನ, ಬಿಜೆಪಿಗೆ 4 ಸ್ಥಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ. ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲಿ ಬಿಟ್ಟುಕೊಡಬೇಕು ಎಂಬ ಬಗ್ಗೆ ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಜೆ.ಪಿ.ನಡ್ಡಾ ಪ್ರಕಟಿಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ನರೇಂದ್ರ ಮೋದಿ ಪ್ರಧಾನಿಯಾಗುವುದು ಖಚಿತ 400 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.