Sunday, January 19, 2025
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ-ಕಹಳೆ ನ್ಯೂಸ್

ಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿಗಳು ತೆರ್ಗಡೆ ಹೊಂದಿರುವುದು ವಿಶೇಷವಾಗಿದೆ.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ ಪ್ರಾಶುಂಪಾಲರಾದ ವಿದ್ವಾನ್ ಗಣಪತಿ ಭಟ್, ಆಡಳಿತ ಮಂಡಳಿಯವರು, ಉಪನ್ಯಾಸಕ ವರ್ಗ, ಎನ್.ಡಿ.ಎ/ಎನ್.ಎ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು