Monday, January 27, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನ್ಯ ಕೋಮಿನ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು : ಆರೋಪಿ ಎರಡು ಮಕ್ಕಳ ತಂದೆ ಅಬ್ದುಲ್ಲಾ ಬಿಳಿಯೂರು ಅರೆಸ್ಟ್..!!-ಕಹಳೆ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬAಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36 ವ.) ಬಂಧಿತ ಆರೋಪಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು ಕರೆಯಿಸಿ ವಿವಿಧ ದಿನಗಳಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ನೊಂದ ಬಾಲಕ ಶಾಲೆಯಲ್ಲಿ ನೀಡಿದ ಮಾಹಿತಿಯಂತೆ ಮಕ್ಕಳ ಸಹಾಯವಾಣಿಗೆ ಕರೆಮಾಡಿ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಸಲಹೆಯಂತೆ ತನ್ನ ತಾಯಿಯೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕ ದೂರು ಸಲ್ಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.