Tuesday, January 28, 2025
ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ.

ಬಿಜೆಪಿ ಟಿಕೆಟ್ ಪ್ರಭಲ ಆಕಾಂಕ್ಷಿಯಾಗುದ್ದ, ಹರೀಶ್ ಆಚಾರ್ ಈಗಾಗಲೇ ನೈಋತ್ಯ ಕ್ಷೇತ್ರದಲ್ಲಿ ಚುನಾವಣಾ ಸಿದ್ದತೆ ನಡೆಸಿದ್ದು, ತಮ್ಮ ಬೆಂಬಲಿಗ ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಪ್ರಮುಖರೊಂದಿಗೂ ಹಲವು ಭಾರಿ ಸಭೆಯನ್ನು ನಡೆಸಿದ್ದು, ಮೈತ್ರಿ ಇಲ್ಲದಿದ್ದರೆ, ಅವರಿಗೆ ಟಿಕೆಟ್ ಎಂಬುದನ್ನು ಬಿಜೆಪಿ ಹೈಕಮಾಂಡ್ ಕೂಡಾ ಹೇಳಿತ್ತು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಇಂದಿನ ಸುದ್ದಿಗೋಷ್ಠಿಯಲ್ಲಿ ಅವರ ನಡೆ ಕುತೂಹಲ ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು