Friday, September 20, 2024
ಸುದ್ದಿ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ, ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಘಟಕದ ವತಿಯಿಂದ ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಹಿತಿ ಹಾಗು ಪರೀಕ್ಷೆಗಳಿಗೆ ತಯಾರಿ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆ.ಡಿ. ಸಿಂಧೆ ತರಬೇತಿ ನಡೆಸಿಕೊಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭ ಸರಳ ಸೂತ್ರಗಳ ಮೂಲಕ ತಿಳಿಸಿಕೊಟ್ಟ ಅವರು, ವಿದ್ಯಾರ್ಥಿಗಳು ನಿರಂತರ ಪರಿಶ್ರಮ, ಶ್ರಧ್ಧೆ ಹಾಗೂ ತಾಳ್ಮೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದಲ್ಲಿ ಸರಕಾರಿ ಉದ್ಯೋಗವನ್ನು ಪಡೆಯುವ ತಮ್ಮ ಕನಸನ್ನು ನನಸಾಗಿಸಬಹುದು ಎಂದರು.

ಪ್ರಾಂಶುಪಾಲೆ ನಳಿನಾಕ್ಷಿ ಎ.ಎಸ್. ಅಧ್ಯಕ್ಷತೆ ವಹಿಸಿದರು. ಐಕ್ಯೂಎಸಿ ಘಟಕದ ಸಂಚಾಲಕ ಪ್ರೊ| ಹರೀಶ್ ನಾಯಕ್ ಮತ್ತು ಐ.ಆರ್.ಸಿ.ಎಂ.ಡಿ ಸಂಚಾಲಕ ಗಣೇಶ್ ಕೆ. ಉಪಸ್ಥಿತರಿದ್ದರು. ಪ್ಲೇಸ್‌ಮೆಂಟ್ ಸೆಲ್‌ನ ಸಂಚಾಲಕ ಪ್ರೊ| ಪದ್ಮನಾಭ ಎಂ. ಸ್ವಾಗತಿಸಿ, ವಿದ್ಯಾರ್ಥಿನಿ ವೀಕ್ಷಿತಾ ವಂದಿಸಿದರು.