ಹೃದಯ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ -ಕಹಳೆ ನ್ಯೂಸ್
ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ರಾಖಿ ಸಾವಂತ್ ಅವರ ಈ ಫೋಟೋಗಳನ್ನು ನೋಡಿದರೆ ಆಕೆಗೆ ಪ್ರಜ್ಞೆ ಇಲ್ಲದೇ ಮಲಗಿದ್ದಾರಾ ಅಥವಾ ಗಾಢ ನಿದ್ರೆಯಲ್ಲಿದ್ದಾರೋ ಎಂಬುದು ತಿಳಿದಿಲ್ಲ. ಫೋಟೋದಲ್ಲಿ ನರ್ಸ್ ಬಿಪಿ ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಹಿಂಭಾಗದಲ್ಲಿ ದೊಡ್ಡ ಇಸಿಜಿ ಯಂತ್ರವನ್ನೂ ಅಳವಡಿಸಲಾಗಿದೆ.
ಸದ್ಯ ಆಕೆಗೆ ಗಂಭೀರ ಹೃದಯ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನಟಿಗೆ ಏನಾಗಿದೆ ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ರಾಖಿ ಸಾವಂತ್ ಈ ಹಿಂದೆಯೂ ಆಸ್ಪತ್ರೆಗೆ ದಾಖಲಾಗಿದ್ದರು. ತನ್ನ ಹೊಟ್ಟೆಯಲ್ಲಿ ಗಡ್ಡೆ ಇತ್ತು ಅದಕ್ಕಾಗಿ ಆಪರೇಷನ್ ಮಾಡಲಾಗಿದೆ ಎಂದು ಹೇಳಿದ್ದರು.