Friday, September 20, 2024
ಆರೋಗ್ಯಮುಂಬೈಸಿನಿಮಾಸುದ್ದಿ

ನಟಿ ಶಮಿತಾ ಶೆಟ್ಟಿಗೆ ವಿಚಿತ್ರ ಕಾಯಿಲೆಗೆ – ಆಸ್ಪತ್ರೆಗೆ ದಾಖಲು ; ‘ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ‘ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸಲಹೆ – ಕಹಳೆ ನ್ಯೂಸ್

ಮುಂಬೈ:ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ ಮಾತನಾಡಿ ʻಮಹಿಳೆಯರೇ, ದಯವಿಟ್ಟು ಎಂಡೊಮೆಟ್ರಿಯೊಸಿಸ್ ಗೂಗಲ್ ಮಾಡಿ. ಸಮಸ್ಯೆ ಏನು ಎಂದು ನೀವು ತಿಳಿದುಕೊಳ್ಳಬೇಕು. ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್‌ನಿಂದ ಬಳಲುತ್ತಿದ್ದಾರೆ ಎಂದು ನಿಮಗೆ ತಿಳಿದಿದೆಯೇ..? ನಮ್ಮಲ್ಲಿ ಹೆಚ್ಚಿನವರಿಗೆ ಈ ರೋಗದ ಬಗ್ಗೆ ತಿಳಿದಿಲ್ಲ !!! ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳಲು ಸಹಾಯ ಮಾಡಿದ ನನ್ನ ವೈದ್ಯರಾದ ಗೈನಾಕ್ ಡಾ ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ! ಈಗ ನಾನು ಈ ರೋಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದ್ದೇನೆ ನನ್ನ ಆರೋಗ್ಯ ಮತ್ತಷ್ಟು ಸುಧಾರಿಸಲು ಎದುರು ನೀಡುತ್ತಿದ್ದೇನೆ. ಈಗೀಗ ನೋವಿಲ್ಲದ ದಿನಗಳನ್ನು ಕಳೆಯುತ್ತಿದ್ದೇನೆ. ಹೀಗಾಗಿ ಎಲ್ಲಾ ಮಹಿಳೆಯರೂ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ಜಾಗೃತರಾಗಿ ಮತ್ತು ಚಿಕಿತ್ಸೆ ಪಡೆಯಿರಿʼʼ ಎಂದು ಸಲಹೆ ನೀಡಿದ್ದಾರೆ.

ಜಾಹೀರಾತು