Tuesday, April 1, 2025
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಮಹಿಳೆಯ ಮೈಮೇಲೆ ಮರಬಿದ್ದು ಮಹಿಳೆ ದಾರುಣ ಸಾವು-ಕಹಳೆ ನ್ಯೂಸ್

ಸುಳ್ಯ: ತೋಟಕ್ಕೆ ಹೋಗಿದ್ದ ವೇಳೆ ಮೈಮೇಲೆ ಮರಬಿದ್ದು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಳಿಯಲ್ಲಿ ನಡೆದಿದೆ.

ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತ ದುರ್ದೈವಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೀನಾಕ್ಷಿಯವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ ತರಲು ಸಂಜೆ ತೆರಳಿದ್ದರು. ಈ ವೇಳೆ ಜೋರಾಗಿ ಗಾಳಿ – ಮಳೆ ಬಂದಿದೆ. ಆಗ ಬೃಹತ್ ಗಾತ್ರದ ಮರವೊಂದು ಮೀನಾಕ್ಷಿಯವರ ಮೇಲೆಯೇ ಬಿದ್ದಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ