Saturday, April 5, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಚಿಕಿತ್ಸೆ ಸರಿಯಾಗಿ ನೀಡದ ಆರೋಪ : ಖಾಸಗಿ ಆಸ್ಪತ್ರೆಯ ವಿರುದ್ಧ ದೂರು..!!! – ಕಹಳೆ ನ್ಯೂಸ್

ಪುತ್ತೂರು: ವೈದ್ಯರ ಎಡವಟ್ಟಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ರೋಗಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಉಳಿಗ್ರಾಮದ ಪಿಲಿಬೈಲ್ ಕೃಷ್ಣಪ್ಪ(51) ಮೃತ ವ್ಯಕ್ತಿ. ಆರೋಗ್ಯದಲ್ಲಿ ಏರುಪೇರಾದ ಕಾರಣ ಕೃಷ್ಣಪ್ಪ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ವೈದ್ಯರು ಚಿಕಿತ್ಸೆ ಸರಿಯಾಗಿ ನೀಡಿದ ಕಾರಣ ಅವರು ಮೃತಪಟ್ಟಿದ್ದಾರೆ ಹಾಗೂ ಅವರ ಸಾವಿನ ಬಗ್ಗೆ ಸಂಶಯವಿದೆ ಅವರ ಮರಣೋತ್ತರ ಪರೀಕ್ಷೆಯನ್ನು ನುರಿತ ವೈದ್ಯರ ಬಳಿ ಮಾಡಿಸಬೇಕೆಂದು ಮೃತರ ತಮ್ಮ ವಸಂತ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ