ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ : ಕಾರ್ಯಕರ್ತರ ಸಭೆಯಲ್ಲಿ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ವಿಶ್ವಾಸ – ಕಹಳೆ ನ್ಯೂಸ್
ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಬೋಜೇಗೌಡರ ನೂರಕ್ಕೆ ನೂರರಷ್ಟು ಖಚಿತ ಎಂದು ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ನಜರಾಬಾದ್ ವಸಂತ ಮಹಲ್ ರಸ್ತೆಯ ವಿಕೆ ಪಂಕ್ಷನ್ ಹಾಲ್ ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಮಯ ಅವಕಾಶ ಕೂಡ ಕಡಿಮೆ ಇರುವುದರಿಂದ ಇಬ್ಬರೂ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಬೇಕು, ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಕೆಸವಲನ್ನು ಮಾಡಬೇಕು. ಜೆಡಿಎಸ್- ಹೊಂದಾಣಿಕೆ ಪಕ್ಷ ಬಲವನ್ನು ಹೆಚ್ಚಿಸಿದೆ, ಇಬ್ಬರ ಗೆಲವು ಗ್ಯಾರಂಟಿ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ,ಮಂಗಳೂರು, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 30 ಶಾಸಕರಿದ್ದು, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾರ್ಯಕರ್ತರೆಲ್ಲರೂ ಒಟ್ಟಾಗಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ದರು ಕರೆ ನೀಡಿದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ನಿಷ್ಟಾವಂತ ಕಾರ್ಯಕರ್ತರಿರುವ ಪಕ್ಷ ಬಿಜೆಪಿ, ಅಭ್ಯರ್ಥಿಯಾಗಿ ಅವಕಾಶ ಮಾಡಿಕೊಟ್ಟ ಪಕ್ಷದ ಹಿರಿಯರಿಗೆ ಅನಂತ ಧನ್ಯವಾದಗಳು, ಹಾಗೆಯೇ ನನ್ನ ಮತ್ತು ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು ಅವರ ಗೆಲುವು ಕಾರ್ಯಕರ್ತರ ಗೆಲುವಾಗಬೇಕು, ಈ ನಿಟ್ಟಿನಲ್ಲಿ ತಾವೆಲ್ಲರೂ ಬೆಂಬಲಿಸಿ, ಮತ ನೀಡಬೇಕು ಎಂದು ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು ಮಾತನಾಡಿ, ಈ ಚುನಾವಣೆಯಲ್ಲಿ ಎಲ್ಲಿಯೂ ಪಕ್ಷದ ಚಿಹ್ನೆ ಇರುವುದಿಲ್ಲ, ಸೀರಿಯಲ್ ನಂಬರ್ ಇರುತ್ತದೆ, ಮತಗಟ್ಟೆಯಲ್ಲಿಯೇ ಇರುವ ಪೆನ್ನು ಬಳಸಿ ಮತದಾನ ಮಾಡಬೇಕು, ಡಾ.ಧನಂಜಯ ಸರ್ಜಿ ಅವರ ಹೆಸರಿನ ಮುಂದೆ ಒಂದು ಎಂದು ಬರೆಯಬೇಕು, ಗೊಂದಲ ಮಾಡಿಕೊಳ್ಳದೇ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸಿ ಇಬ್ಬರೂ ಅಭ್ಯರ್ಥಿಗಳ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ವಿರೋಧ ಪಕ್ಷದ ಆರ್.ಅಶೋಕ್, ಶಿವಮೊಗ್ಗ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು. ಇದಕ್ಕೂ ಮುನ್ನ ತಾಯಿ ರೇಣುಕಮ್ಮ , ಪತ್ನಿ ಸಮಿತಾ ಸರ್ಜಿ ಅವರೊಂದಿಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ರುದ್ರೇಗೌಡ್ರು, ಬಿಜೆಪಿ ಹಿರಿಯ ಮುಖಂಡರಾದ ಎನ್.ಜೆ.ರಾಜಶೇಖರ್ ( ಸುಭಾಷ್) ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಭಾಗಿಯಾಗಿದ್ದರು, ಅಲ್ಲದೇ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ (ಚನ್ನಗಿರಿ, ನ್ಯಾಮತಿ, ಹೊನ್ನಾಳಿ) ಜಿಲ್ಲೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಅದರಲ್ಲೂ ಬಹುಮುಖ್ಯವಾಗಿ ಎಸ್. ದತ್ತಾತ್ರಿ,ವಿಕಾಸ್ ಪುತ್ತೂರ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜ್ಞಾನೇಶ್ವರ್ ಅವರು ಕ್ಷೇತ್ರ ಟಿಕೆಟ್ ಕಾಂಕ್ಷಿಗಳಾಗಿದ್ದರೂ ಕೂಡ ಪಕ್ಷದ ಮೆರೆದು ಪಕ್ಷದ ಅಭ್ಯರ್ಥಿಗೆ ಬೆಂಬಲಿಸಿದ್ದು, ವಿಶೇಷವಾಗಿತ್ತು.