Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಜೀಪು : ಗಂಭೀರ ಗಾಯಗೊಂಡ ಸ್ಕೂಟರ್ ಸವಾರ – ಕಹಳೆ ನ್ಯೂಸ್

ಬಂಟ್ವಾಳ: ಜೀಪೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದ್ದು , ಗಾಯಗೊಂಡ ಸ್ಕೂಟರ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಣಂದೂರು ನಿವಾಸಿ ಮಹಮ್ಮದ್ ಅರ್ಫಾಸ್ ಗಾಯಗೊಂಡ ಯುವಕನಾಗಿದ್ದಾನೆ. ಜೀಪ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ ಜಖಂಗೊ0ಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುಂಜಾಲಕಟ್ಟೆ ಠಾಣೆಯ ಸಮೀಪವಿರುವ ನಂದಗೋಕುಲ ಮುಂಭಾಗದಲ್ಲಿ ಬಿಸಿರೋಡು ಬೆಳ್ತಂಗಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಹಾಲ್ ಸಮೀಪ ರಸ್ತೆಯಲ್ಲಿ ನಿಲ್ಲಿಸಲಾಗಿರುವ ಜೀಪನ್ನು ಚಾಲಕ ವಸಂತ ಶೆಟ್ಟಿ ಎಂಬವರು ಅಜಾಗರೂಕತೆಯಿಂದ ಒಮ್ಮೆಲೆ ಬಂಟ್ವಾಳ ಕಡೆಗೆ ತಿರುಗಿಸಿದಾಗ ಬಿಸಿರೋಡಿನ ಕಡೆಯಿಂದ ಬರುತ್ತಿದ್ದ ಸ್ಕೂಟರ್ ಸವಾರ ಅರ್ಫಾಸ್ ಅವರಿಗೆ ಡಿಕ್ಕಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಸ್ಥಳೀಯರು ಗಾಯಗೊಂಡ ಅರ್ಫಾಸ್ ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಕಾರಣಕ್ಕಾಗಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೀಪ್ ಚಾಲಕನ ನಿರ್ಲಕ್ಷ್ಯ ತನದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಈತನ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಈತನ ಸಂಬAಧಿಕ ರಶೀದ್ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ಉದಯರವಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.