Recent Posts

Monday, January 20, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಮಾ ಕಂತು ಪಾವತಿಸದ ವಾಹನ ಬಳಸಿದ ಪೊಲೀಸ್ ಇಲಾಖೆ ; ವೀಡಿಯೋ ವೈರಲ್..! – ಕಹಳೆ ನ್ಯೂಸ್

ಮಂಗಳೂರು : ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿ ವೀಡಿಯೋವೊಂದು ವೈರಲ್ ಆಗುತ್ತಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸ್ಪಷ್ಟನೆಯನ್ನು ನೀಡಿದೆ.

ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ವ್ಯಕ್ತಿಯೋರ್ವರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದು ತಪ್ಪು ಮಾಹಿತಿ ಆಗಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್ಮೆಂಟ್ (ಕೆ.ಜಿ.ಐ.ಡಿ) ವಿಮೆಯನ್ನು ಕಡ್ಡಾಯವಾಗಿ ಹೊಂದಿರುತ್ತದೆ ಹಾಗೂ ಸದರಿ ವಿಮೆಯನ್ನು ಕಾಲ ಕಾಲಕ್ಕೆ ನವೀಕರಿಸಲಾಗುತ್ತದೆ. ವಿಮೆ ನವೀಕರಣಗೊಳ್ಳದ ಯಾವುದೇ ವಾಹನಗಳನ್ನು ಕರ್ತವ್ಯಕ್ಕೆ ಬಳಸಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಮಾಜಿಕ ಜಾಲತಾಣದಲ್ಲಿ ತೋರಿಸಲಾದ ಇಲಾಖಾ ಹೆದ್ದಾರಿ ಗಸ್ತು ವಾಹನದ ವಿಮಾ ಅವಧಿಯು 13-10-2025ರ ತನಕ ಮತ್ತು ವಾಹನದ ಮಾಲಿನ್ಯ ತಪಾಸಣಾ ಅವಧಿಯು 08-01-2025ರ ತನಕ ಚಾಲ್ತಿಯಲ್ಲಿ ಇರುತ್ತದೆ.

ಈ ವಿಷಯಕ್ಕೆ ಸಂಬAಧಿಸಿದAತೆ ಸದರಿ ವ್ಯಕ್ತಿಯು ತನ್ನ ಮೋಟಾರ್ ಬೈಕ್‌ನ ವಾಯುಮಾಲಿನ್ಯ ಪತ್ರವನ್ನು ತೋರ್ಪಡಿಸದೇ ಇರುವುದರಿಂದ ಸದರಿ ವ್ಯಕ್ತಿಯ ಮೇಲೆ ರೂ. 500/- ದಂಡವನ್ನು ವಿಧಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.