Recent Posts

Monday, January 20, 2025
ಸುದ್ದಿ

ಪುರಸಭೆಯ ಕ್ರೀಡಾ ನಿಧಿಯಿಂದ ಆರ್ಥಿಕ ನೆರವು ನೀಡಲು ಮನವಿ – ಕಹಳೆ ನ್ಯೂಸ್

ಬಂಟ್ವಾಳ : ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುವೋರ್ವರು ಅತ್ಲೆಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲು ಕ್ರೀಡಾ ನಿಧಿಯಿಂದ ಆರ್ಥಿಕ ಸಹಾಯ ನೀಡುವಂತೆ ಒತ್ತಾಯಿಸಿ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಅವರು ಸ್ಥಳೀಯ ಆಡಳಿತ ವ್ಯವಸ್ಥೆ ಪುರಸಭೆಗೆ ಮನವಿ ಮಾಡಿದ್ದಾರೆ.

ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ನಿವಾಸಿ ಗ್ಲೇಡಿಸ್ ಪಾಯಸ್ ಅವರು ಅ.28 ರಂದು ಇಂಡೋನೇಷ್ಯಾ ದಲ್ಲಿ ನಡೆಯುವ ಹಿರಿಯ ರ ವಿಭಾಗದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಇವರಿಗೆ ಈ ಸ್ಪರ್ಧೆಯಲ್ಲಿ ಭಾಗವಹಸಲು ಆರ್ಥಿಕ ನೆರವಿನ ಅಗತ್ಯವಿರುವುದರಿಂದ ಸಹಾಯದ ಹಸ್ತ ಬೇಕಾಗಿದೆ. ಹಾಗಾಗಿ ಪುರಸಭೆಯ ಕ್ರೀಡಾ ನಿಧಿಯಿಂದ ಆರ್ಥಿಕ ನೆರವು ನೀಡುವಂತೆ ಎಸ್ .ಐ.ಚಂದ್ರಶೇಖರ್ ಅವರು ಮನವಿ ಮಾಡಿದ್ದಾರೆ.