Recent Posts

Sunday, January 19, 2025
ಬೆಂಗಳೂರುಸುದ್ದಿ

ವಿದೇಶದಲ್ಲಿರುವ ಸಂಸದ ಪ್ರಜ್ವಲ್​ ರೇವಣ್ಣ ಅಕೌಂಟ್​ಗೆ ಬೆಂಗಳೂರಿನಿಂದ ಹಣ ವರ್ಗಾವಣೆ ; ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಸಿದ್ಧತೆ ನಡೆಸಿದ ಎಸ್‌ಐಟಿ- ಕಹಳೆ ನ್ಯೂಸ್

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್​ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ರೂ.ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿ ದೊರೆತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್​ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಇತ್ತ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಈಗಾಗಲೆ ನೋಟಿಸ್ ನೀಡಿದ್ದರೂ ಕೂಡ ಪ್ರಜ್ವಲ್​ ರೇವಣ್ಣ ಮಾತ್ರ ಹಾಜರಾಗುತ್ತಿಲ್ಲ. ವಿದೇಶದಲ್ಲೇ ಕಾಲ ಕಳೆಯುತ್ತಿದ್ದಾರೆ. ಹೀಗಾಗಿ ಪ್ರಜ್ವಲ್​ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್​ಐಟಿ ಪ್ಲ್ಯಾನ್ ಮಾಡಿದೆ.