Recent Posts

Sunday, January 19, 2025
ಬೆಂಗಳೂರುರಾಜಕೀಯಸುದ್ದಿ

ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಹೊಗಳಿದ ರಶ್ಮಿಕಾ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಕಿಡಿ – ಕಹಳೆ ನ್ಯೂಸ್

ಉತ್ತರ ಕನ್ನಡ : ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ಅವರನ್ನ ಮಾಜಿ ಶಾಸಕಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ. ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ಕಿಡಿಕಾರಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ದೇಶದ ಅತ್ಯಂತ ಉದ್ದದ ಸಮುದ್ರ ಸೇತುವೆ ಮುಂಬೈನ ಅಟಲ್ ಸೇತು ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ವಿಡಿಯೋ ಪೋಸ್ಟ್‌ ಮಾಡಿದ್ದರು. ಅದಲ್ಲದೇ ಕಳೆದ 10 ವರ್ಷಗಳಲ್ಲಿ ಅಂದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯಲ್ಲಾದ ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದರು. ಇದನ್ನು ಪ್ರಧಾನಿ ಮೋದಿ ಸೇರಿ, ಬಹುತೇಕ ಬಿಜೆಪಿ ನಾಯಕರು ಹಂಚಿಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಶ್ಮಿಕಾ ಮಂದಣ್ಣ ವಿಡಿಯೋಗೆ ತಮ್ಮ ಅಧಿಕೃತ ಫೇಸ್‍ಬುಕ್‍ನಲ್ಲಿ ಪ್ರತಿಕ್ರಿಯಿಸಿರುವ ಅಂಜಲಿ ನಿಂಬಾಳ್ಕರ್, ಬುಲೆಟ್ ರೈಲಿನ ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿದ್ದಾರೆ. ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಮಾಡಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು