Saturday, November 23, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಪತ್ತನಾಜೆ ಜಾನಪದ ಹಬ್ಬ ಕಾರ್ಯಕ್ರಮ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಜೋಗತಿ ಮಂಜಮ್ಮ ಭಾಗಿ – ಕಹಳೆ ನ್ಯೂಸ್

ಬಂಟ್ವಾಳ: ನಮ್ಮ ಜಾನಪದವನ್ನು ತಿಳಿದುಕೊಂಡು ಮಕ್ಕಳಿಗೆ ದಾಟಿಸುವ ಕಾರ್ಯ ಆಗಬೇಕಿದ್ದು, ಕನ್ನಡ ಶಾಲೆಯಲ್ಲೇ ಮಕ್ಕಳಿಗೆ ಶಿಕ್ಷಣ ನೀಡಿದಾಗ ಭಾμÉಯ ಬೆಳವಣಿಗೆಯ ಜತೆಗೆ ಸಂಸ್ಕøತಿ-ಸಂಸ್ಕಾರ ಉಳಿಯಲು ಸಾಧ್ಯ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಜೋಗತಿ ಮಂಜಮ್ಮ ಹೇಳಿದರು.

ಅವರು ಕರ್ನಾಟಕ ಜಾನಪದ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಪತ್ತನಾಜೆ ಜಾನಪದ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪತ್ತನಾಜೆಯ ಕುರಿತು ವಿಶೇಷ ಉಪನ್ಯಾಸ ನೀಡಿದ ಉಜಿರೆ ಎಸ್‍ಡಿಎಂ ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ದಿವಾ ಕೊಕ್ಕಡ ಅವರು ಮಾತನಾಡಿ, ಪತ್ತನಾಜೆ ಜನಜೀವನಕ್ಕೆ ಒಂದು ರೀತಿಯ ಗಡುವಾಗಿದ್ದು, ನಮ್ಮೆಲ್ಲ ಸಮಾರಂಭಗಳನ್ನು ಪತ್ತನಾಜೆಗೆ ಮೊದಲು ಮುಗಿಸಿ ಮಳೆಗಾಲದ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂಬ ಸಂದೇಶವಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಪೆÇಳಲಿ ದೇವಸ್ಥಾನದ ಪ್ರಧಾನ ಅರ್ಚಕ ಪಿ.ರಾಮ ಭಟ್, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪೆÇ್ರ| ತುಕರಾಮ್ ಪೂಜಾರಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಮೋಹನ್ ಶೆಟ್ಟಿ ನರ್ವಲ್ದಡ್ಡ, ಜಿಲ್ಲಾ ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಾಜೇಶ್ , ಬಂಟ್ವಾಳ ಪುರಸಭಾ ಮಾಜಿ ಉಪಾಧ್ಯಕ್ಷೆ ಯಾಸ್ಮಿನ್ ಹಾಮದ್, ಸೇವ್‍ಲೈಫ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಅರ್ಜುನ್ ಭಂಡಾರ್ಕರ್ ಉಪಸ್ಥಿತರಿದ್ದರು.
ಘಟಕದ ಅಧ್ಯಕ್ಷೆ ಪ್ರಮೀಳಾ ಮಾಣೂರು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಅಕ್ಬರ್ ಆಲಿ ಅವರು ಸಮ್ಮಾನ ಪತ್ರ ವಾಚಿಸಿದರು. ಗೌರವ ಸಲಹೆಗಾರ ಅನಿಲ್ ಪಂಡಿತ್ ವಂದಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಎಚ್.ಕೆ.ನೈನಾಡು ಕಾರ್ಯಕ್ರಮ ನಿರೂಪಿಸಿದರು.