Tuesday, January 21, 2025
ಪುತ್ತೂರುಸುದ್ದಿ

ಹಿಟ್ ಎಂಡ್ ರನ್ ಸ್ಕೂಟರ್ ಸವಾರ ಸಾವು: ಅಪಘಾತವೆಸಗಿದ ಕಾರು ಸಹಿತ ಚಾಲಕ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಅಪರಿಚಿತ ಕಾರೊಂದು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಚಿ ಎಂಬಲ್ಲಿ ನಡೆದಿದೆ.

ಪುತ್ತೂರು ನಿವಾಸಿ ಸ್ಕೂಟರ್ ಸವಾರ ಚಿದಾನಂದ ಕಾಮತ್ (54) ಮೃತಪಟ್ಟ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಚಿ ಸಮೀಪದ ಮೋಂತಿಮಾರ್ ಕಾಯರಪಡ್ಪು ಎಂಬಲ್ಲಿ ಘಟನೆ ನಡೆದಿದ್ದು, ಸಾಲೆತ್ತೂರುವಿನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಸವಾರ ಚಿದಾನಂದ ಕಾಮತ್ ಅವರಿಗೆ ಅಜಾಗರೂಕತೆಯಿಂದ ಮತ್ತು ಅತೀವೇಗದಿಂದ ಬಂದ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರನನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.