Tuesday, January 21, 2025
ಉಡುಪಿಕಾಪುಸುದ್ದಿ

ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಪೂರ್ವ ಸಿದ್ಧತಾ ಸಭೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024 ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಜೂನ್ 03 ರಂದು ನಡೆಯಲಿದ್ದು,ಇದರ ಪೂರ್ವಭಾವಿಯಾಗಿ  ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಸಭೆಯಲ್ಲಿ ಶಾಸಕರು ಮಾತನಾಡಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರದ ಮತದಾರರನ್ನು ಸಂಪರ್ಕಿಸಬೇಕು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲು ಶ್ರಮಿಸಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಶೆಟ್ಟಿ ಹೆರ್ಗ, ರೇಷ್ಮಾ ಶೆಟ್ಟಿ, ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಜಾತ್ಯತೀತ ಜನತಾ ದಳ (ಜೆಡಿಎಸ್) ಜಿಲ್ಲಾಧ್ಯಕ್ಷರಾದ ಯೋಗೀಶ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಮಟ್ಟು, ಕಾಪು ಕ್ಷೇತ್ರದ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಸಂಚಾಲಕರಾದ ಪ್ರಸಾದ್ ಶೆಟ್ಟಿ ಕುತ್ಯಾರು ಹಾಗೂ ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು