ಶಿರಾಡಿ: ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರೊಂದು ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತಗೊಂಡ ಪರಿಣಾಮ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ ಶಬ್ಬಿರ್ ಎಂಬವರ ಮಗ ಮೊಹಮ್ಮದ್ ಶಫೀಕ್(20) ಹಾಗೂ ಅವರ ಪತ್ನಿ ಸಫಿಯಾ(50) ಎಂದು ಗುರುತಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.