Sunday, January 19, 2025
ಬೆಂಗಳೂರುಸಿನಿಮಾಸುದ್ದಿ

ಗಂಡನಿಂದಲೇ ಭೀಕರ ಕೊಲೆಯಾದ ‘ಭಜರಂಗಿ’ ಸಿನಿಮಾ ನಟಿ !– ಕಹಳೆ ನ್ಯೂಸ್

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ.

ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು. ಇದೀಗ ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದಾರೆ. ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲಗಳ ಪ್ರಕಾರ ಆದರೆ ವಿದ್ಯಾ ಅವರು ಕಾಂಗ್ರೆಸ್‌ನಲ್ಲಿದ್ದರೂ ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು.

ವಿದ್ಯಾ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ ಕೊಲೆ ಸಂಭವಿಸಿದೆ ಎಂದು ವರದಿಯಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.