Recent Posts

Wednesday, April 23, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿಧಿ, ರಿಷಿಕಾಗೆ ಅನಂತ ಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಸಿಟಿ ರೋಟರಿ ಕ್ಲಬ್ ನ ಅನಂತಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿಗೆ ( ಯಂಗ್ ಅಚೀವರ್ ಅವಾರ್ಡ್ಸ್) ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಮತ್ತು ಶಿಕ್ಷಣ ಅ್ಯಪ್ ಡೆವೆಲೆಪರ್ ಶ್ರೀನಿಧಿ ಆಯ್ಕೆಯಾಗಿದ್ದಾರೆ.

ಕೊಡಿಯಾಲಬೈಲ್ ಉತ್ಸವ ಹೋಟೇಲ್ ಸಭಾಂಗಣದಲ್ಲಿ ಮೇ 22 ರಂದು ರಾತ್ರಿ 8 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಪ್ರಶಸ್ತಿ ಪ್ರದಾನ ಮಾಡುವರು. ರೋಟರಿ ಅಧ್ಯಕ್ಷ ಪ್ರಶಾಂತ್ ರೈ, ಪ್ರಧಾನ ಕಾರ್ಯದರ್ಶಿ ಗಣೇಶ್, ಸ್ಥಾಪಕಾಧ್ಯಕ್ಷ ಡಾ.ರಂಜನ್ ಶೆಟ್ಟಿ ಉಪಸ್ಥಿತರಿರುವರು.
ಮೇ ತಿಂಗಳು ಯುವ ಸೇವಾ ಮಾಸ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜೇಂದ್ರ ಕಲ್ಬಾವಿ ಅವರು ತಮ್ಮ ಹೆತ್ತವರಾದ ಅನಂತ ಕಲ್ಬಾವಿ ಸುಮಿತ್ರಾ ಕಲ್ಬಾವಿ ಹೆಸರಲ್ಲಿ ಪ್ರಶಸ್ತಿ ನಿಧಿ ಸ್ಥಾಪಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ