Recent Posts

Monday, January 20, 2025
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

1ನೇ ತರಗತಿ ಪ್ರವೇಶಕ್ಕೆ 2024-25ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ನಿಗದಿತ ವಯೋಮಿತಿಗೆ ಒಂದು ದಿನ ಕಡಿಮೆ ಆದರೂ ಮಕ್ಕಳೂ ದಾಖಲಾತಿ ವಂಚಿತರಾಗುತ್ತಿದ್ದಾರೆ. ಹೀಗಾಗಿ ಒಂದು ವರ್ಷ ಶಾಲಾ ಪ್ರವೇಶದಿಂದ ಮಕ್ಕಳು ವಂಚಿತರಾಗುವುದನ್ನು ತಡೆಯಲು ನಿಗದಿತ ವಯೋಮಿತಿಯಲ್ಲಿ ಕೆಲ ತಿಂಗಳ ಸಡಿಲ ಅಥವಾ ವಿನಾಯಿತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.