Sunday, January 19, 2025
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇವ್ ಪಾರ್ಟಿ ಪ್ರಕರಣ : ನಟಿಯರಾದ ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್ ; ಡ್ರಗ್ಸ್ ಸೇವಿಸಿರುವುದು ದೃಢ – ಕಹಳೆ ನ್ಯೂಸ್

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಅದರಲ್ಲಿ ತೆಲುಗು ನಟಿಯರಾದ ಹೇಮಾ (Actress Hema) ಮತ್ತು ಆಶಿ ರಾಯ್ (Aashi Roy) ಬ್ಲಡ್ ರಿಪೋರ್ಟ್ ಕೂಡ ಪಾಸಿಟಿವ್ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೂಲಕ ತೆಲುಗು ನಟಿ ಹೇಮಾ ಮತ್ತು ಆಶಿ ರಾಯ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. 103 ಮಂದಿಯ ಪೈಕಿ 86 ಜನ ಡ್ರಗ್ಸ್ ಸೇವಿರುವುದು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿದೆ. ಸದ್ಯ ಬ್ಲಡ್ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದವರಿಗೆ ಸಿಸಿಬಿ ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ವಾಸು ಎಂಬಾತನ ಬರ್ತಡೇ ಅಂಗವಾಗಿ Sunset To Sun Rise Victory ಶೀರ್ಷಿಕೆಯಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ನೂರರಿಂದ ನೂರೈವತ್ತು ಮಂದಿ ಜಮಾವಣೆಗೊಂಡಿದ್ದರು.