Tuesday, January 21, 2025
ಉಡುಪಿಸುದ್ದಿ

ಮಣಿಪಾಲ ರಜತಾದ್ರಿ ಬಳಿ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಗೌರವಾರ್ಪಣೆ– ಕಹಳೆ ನ್ಯೂಸ್

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಣಿಪಾಲದ ರಜತಾದ್ರಿ ಬಳಿ ಇರುವ ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವಾರಾಜ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್, ನಿಕಟಪೂರ್ವ ಅಧ್ಯಕ್ಷ ದಾವೂದ್ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು