Sunday, November 24, 2024
ದೆಹಲಿಸುದ್ದಿ

ಕಾನೂನುಬಾಹಿರ ಚಟುವಟಿಕೆಗಳ ಅಡಿಯಲ್ಲಿ ಬಂಧಿತರಾಗಿರುವ 8 ಮಂದಿ PFI ಕಾರ್ಯಕರ್ತರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌-ಕಹಳೆ ನ್ಯೂಸ್

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧಿತರಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)ನ ಎಂಟು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ರದ್ದುಗೊಳಿಸಿದೆ.

ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್‌ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಿ ಎಂದು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರಿದ್ದ ಪೀಠವು ಕಳೆದ ವರ್ಷ ಅಕ್ಟೋಬರ್ 19 ರಂದು ಹೈಕೋರ್ಟ್‌ನಿಂದ ಜಾಮೀನು ಪಡೆದ ಆರೋಪಿಗಳಿಗೆ ತಕ್ಷಣವೇ ಶರಣಾಗಿ ಜೈಲಿಗೆ ಹೋಗುವಂತೆ ಸೂಚಿಸಿತು. ಪೀಠವು ತನ್ನ ತೀರ್ಪು ನೀಡುವಾಗ, ‘ಹೈಕೋರ್ಟ್ ನೀಡಿದ ಆದೇಶವನ್ನು ರದ್ದುಗೊಳಿಸಲಾಗಿದೆ’ ಎಂದು ಹೇಳಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು