Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುತ್ತೂರು :ಕೆಲ ದಿನಗಳ ಹಿಂದೆ ಕಬಕದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು!

ಪುತ್ತೂರು : ಕೆಲ ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೊ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮನೆಯವರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.