Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಡಿಲಿಗೆ ಬಲಿಯಾದ ಯುವಕನ ಕುಟುಂಬದವರಿಗೆ ಐದು ಲಕ್ಷ ಪರಿಹಾರ ; ಘಟನೆ ನಡೆದ ಸ್ಥಳಕ್ಕೆ ತಹಶಿಲ್ದಾರ್ ಪ್ರತಿಭಾ ಭೇಟಿ -ಕುಟುಂಬದವರಿಗೆ ಸಾಂತ್ವನ-ಕಹಳೆ ನ್ಯೂಸ್

ಶಿರ್ವ: ಇಲ್ಲಿನ ಗ್ರಾಮ ಪಂ.ಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.

ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11.30 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ನಡೆದ ಸ್ಥಳಕ್ಕೆ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಸರಕಾರದ ವತಿಯಿಂದ ಐದು ಲಕ್ಷ ಪರಿಹಾರ ನೀಡಿಲಾಗಿದೆ.